ದೇಶದಲ್ಲಿ 3ನೇ ಅಲೆ ಭೀತಿ ಎದುರಾಗುತ್ತಿದ್ದು, ಮಕ್ಕಳನ್ನು ಹೆಚ್ಚಾಗಿ ಕಾಡಲಿದೆ ಎಂದು ತಜ್ಞರ ಎಚ್ಚರಿಕೆ ಬೆನ್ನಲ್ಲೇ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.
2ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ 2 ಮತ್ತು 3ನೇ ಹಂತದ ಪ್ರಯೋಗ ನಡೆಸಬಹುದು ಎಂದು ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿದ ಭಾರತ್ ಬಯೋಟೆಕ್ ಸಂಸ್ಥೆಗೆ ಅನುಮತಿ ನೀಡಲಾಗಿದೆ.
ದೆಹಲಿಯ ಏಮ್ಸ್, ಪಾಟ್ನಾದ ಏಮ್ಸ್, ನಾಗ್ಪುರದ ಮೆಡಿಟ್ರಿನಾ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸೇರಿದಂತೆ ದೇಶದ 525 ಸ್ಥಳಗಳಲ್ಲಿ ಮಕ್ಕಳ ಮೇಲೆ ಪ್ರಯೋಗ ನಡೆಸಲು ಅನುಮತಿ ನೀಡಲಾಗಿದೆ.