ರಾಮನಗರ: ಬಿಡದಿಯಲ್ಲಿರುವ ಟೊಯೋಟಾ ಕಾರು ತಯಾರಿಕಾ ಘಟಕದಲ್ಲಿ ಕಳೆದ ಕೆಲ ತಿಂಗಳುಗಳಿಂದ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ನಡುವೆ ಬಿಕ್ಕಟ್ಟು ಉಂಟಾಗಿದೆ. ಇದೀಗ ಈ ಬಿಕ್ಕಟ್ಟು ಶಮನಗೊಳಿಸಲು ರಾಜ್ಯ ಸರ್ಕಾರ ಟೊಯೋಟಾ ಕಂಪನಿಯ ಆಡಳಿತ ಮಂಡಳಿಗೆ ಎರಡು ದಿನಗಳ ಗಡವು ನೀಡಿದೆ.
ಸರ್ಕಾರದ ಪ್ರತಿನಿಧಿಗಳು ಆಡಳಿತ ಮಂಡಳಿಗೆ ಸಮಸ್ಯೆ ಇತ್ಯರ್ಥಕ್ಕೆ ಎರಡು ದಿನಗಳ ಗಡವು ನೀಡಿದ್ದಾರೆ. ಟೊಯೋಟಾ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ನಡುವೆ ಬೆಂಗಳೂರಿನ ಖನಿಜ ಭವನದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಸಮಸ್ಯೆ ಅಲಿಸಿದ ನಂತರ ಅಂತಿಮವಾಗಿ ಕಾರ್ಖಾನೆಯ ಆಡಳಿತ ಮಂಡಳಿಗೆ ಸಮಸ್ಯೆ ಇತ್ಯರ್ಥಕ್ಕೆ ಎರಡು ದಿನಗಳ ಗಡವು ನೀಡಲಾಯಿತು. ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ , ಬೆಂಗಳೂರು ಸಂಸದ ಡಿ. ಕೆ. ಸುರೇಶ್, ಮಾಗಡಿ ಶಾಸಕ ಎ. ಮಂಜುನಾಥ್ ಮತ್ತು ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.