ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ (Anand Mahindra)ಬಿಗ್ ಆಫರ್ ಕೊಟ್ಟಿದ್ದಾರೆ. ಜೊತೆಗೆ ಟ್ವಿಟ್ಟರ್ನಲ್ಲಿ ಅಗ್ನಿವೀರ್ ಯೋಜನೆಯನ್ನು ಕೇಂದ್ರವು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.
ಅಗ್ನಿಪಥ್ (AGNIPATH) ಸುತ್ತಲಿನ ಹಿಂಸಾಚಾರದಿಂದ ನಾನು ದುಃಖಿತನಾಗಿದ್ದೇನೆ ಎಂದು ಹೇಳಿದ ಅವರು, ನಾಲ್ಕು ವರ್ಷಗಳಲ್ಲಿ ಅಗ್ನಿವೀರರು ಗಳಿಸುವ ಕೌಶಲ್ಯ ಮತ್ತು ಶಿಸ್ತು ಅವರನ್ನು ಉದ್ಯೋಗಿಗಳನ್ನಾಗಿ ಮಾಡುತ್ತದೆ. ಮಹೀಂದ್ರಾ (MHAHINDRA ) ಗ್ರೂಪ್ ಅಂತಹ ತರಬೇತಿ ಪಡೆದ ಮತ್ತು ಸಮರ್ಥ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ ಎಂದು ದೊಡ್ಡ ಆಫರ್ ಕೊಟ್ಟಿದ್ದಾರೆ. ಇದನ್ನು ಓದಿ :- ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ – ಯಲಹಂಕ ವಾಯುನೆಲೆಯಲ್ಲಿ ಸಿಎಂ ಬೊಮ್ಮಾಯಿ ಸ್ವಾಗತ
ಒಂದು ನಿಮಿಷದಲ್ಲೇ ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು ಅದಕ್ಕೆ ಪ್ರತಿಕ್ರಿಯಿಸಿದ್ದು, ಅಗ್ನಿವೀರರಿಗೆ ಮಹೀಂದ್ರಾ ಗ್ರೂಪ್ ಯಾವ ರೀತಿಯ ಪೋಸ್ಟ್ಗಳನ್ನು ನೀಡುತ್ತದೆ? ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆನಂದ್ ಮಹೀಂದ್ರಾ, ಕಾರ್ಪೊರೇಟ್ ವಲಯದಲ್ಲಿ ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗಾವಕಾಶವಿದೆ. ಕಾರ್ಪೊರೇಟ್ ವಲಯದಲ್ಲಿ ಅಗ್ನಿವೀರರಿಗೆ ಉದ್ಯೋಗಕ್ಕೆ ದೊಡ್ಡ ಸಾಮರ್ಥ್ಯವಿದೆ. ನಾಯಕತ್ವ, ಟೀಮ್ವರ್ಕ್ ಮತ್ತು ದೈಹಿಕ ತರಬೇತಿಯೊಂದಿಗೆ ಅಗ್ನಿವೀರರು ಉದ್ಯಮಕ್ಕೆ ಬೇಕಾದ ಮಾರುಕಟ್ಟೆ-ಸಿದ್ಧ ವೃತ್ತಿಪರ ಪರಿಹಾರಗಳನ್ನು ಒದಗಿಸುತ್ತಾರೆ. ಕಾರ್ಯಾಚರಣೆಗಳಿಂದ ಆಡಳಿತ ಮತ್ತು ಪೂರೈಕೆ ಸರಪಳಿ ನಿರ್ವಹಣೆಯವರೆಗಿನ ಸಂಪೂರ್ಣ ಶಕ್ತಿಯನ್ನು ಅವರು ಹೊಂದಿದ್ದಾರೆ ಎಂದು ಉತ್ತರ ಕೊಟ್ಟಿದ್ದಾರೆ.
ಇದನ್ನು ಓದಿ :- ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ