ಬಿಜೆಪಿ ನಾಯಕಿ, ನಟಿ ಸೋನಾಲಿ ಪೋಗಟ್ (Sonali Phogat) ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನಟಿಯ ಸಾವು ಸಹಜವಾದದ್ದಲ್ಲ, ಕೊಲೆ ಎಂಬುದಕ್ಕೆ ಪೊಲೀಸರಿಗೆ ಕೆಲವು ಸಾಕ್ಷಿ ಸಿಕ್ಕಿದೆ. ಸೋನಾಲಿ ದೇಹದ ಮೇಲೆ ಹಲವು ಗಾಯಗಳು ಆಗಿದ್ದವು ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಿಂದ ಗೊತ್ತಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಗೋವಾ ಪೊಲೀಸರು ಸೋನಾಲಿ ( sonali ) ಅವರ ಇಬ್ಬರು ಸಹಚರರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಸೋನಾಲಿ ಅವರಿಗೆ 42 ವರ್ಷ ವಯಸ್ಸಾಗಿತ್ತು. ಆಗಸ್ಟ್ 22ರಂದು ಅವರು ಗೋವಾದಲ್ಲಿ ನಿಧನ ಹೊಂದಿದ್ರು. ಅವರ ಸಾವಿಗೆ ಹೃದಯಾಘಾತ ಕಾರಣ ಎಂದು ಆರಂಭದಲ್ಲಿ ಹೇಳಲಾಗಿತ್ತು. ಇದು ಸಹಜ ಸಾವಲ್ಲ ಕೊಲೆ ಎಂಬ ಆರೋಪವನ್ನು ಕುಟುಂಬದವರು ಮಾಡಿದ್ದರು. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಈ ವೇಳೆ ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ : – ನಾನು ಸಿಎಂ ಆಗಿದ್ದಾಗ ಕಮಿಷನ್ ವ್ಯವಸ್ಥೆ ಇರಲಿಲ್ಲ – ಹೆಚ್.ಡಿ ಕುಮಾರಸ್ವಾಮಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಸಾಗ್ವಾನ್ ಹಾಗೂ ಸುಖ್ವಿಂದರ್ ವಾಸಿ ವಿರುದ್ಧ್ ಕೇಸ್ ದಾಖಲಾಗಿದೆ. ಆಗಸ್ಟ್ 22ರಂದು ಸೋನಾಲಿ ಗೋವಾಗೆ ಬಂದ ಸಂದರ್ಭದಲ್ಲಿ ಅವರ ಜತೆ ಸುಧೀರ್ ಹಾಗೂ ಸುಖ್ವಿಂದರ್ ಇದ್ದರು. ‘ಸೋನಾಲಿ ಸಾವಿಗೆ ಕಾರಣ ಏನು ಎಂಬುದನ್ನು ನಾವು ಪರೀಕ್ಷಿಸುತ್ತಿದ್ದೇವೆ. ಅವರ ದೇಹದ ಮೇಲೆ ಗಾಯಗಳು ಕಂಡು ಬಂದಿದೆ. ಈ ಕಾರಣದಿಂದ ಸಾಕಷ್ಟು ಅನುಮಾನ ಮೂಡಿದೆ’ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾಕ್ಟರ್ ಸುನೀಲ್ ಶ್ರೀಕಾಂತ್ ಹೇಳಿದ್ದಾರೆ.
ಇದನ್ನೂ ಓದಿ : – ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ