ಬಿಗ್ ಬಾಸ್ ಸೀಸನ್ 13ರ ವಿಜೇತ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 40 ವರ್ಷ ವಯಸ್ಸಾಗಿತ್ತು.
ಗುರುವಾರ ರಾತ್ರಿ ಮಲಗುವಾಗ ಮಾತ್ರೆ ತೆಗೆದುಕೊಂಡು ಮಲಗಿದ್ದು, ಬೆಳಿಗ್ಗೆ ಎದ್ದೇಳಲಿಲ್ಲ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಿದ್ಧಾರ್ಥ್ ತಾಯಿ ಹಾಗೂ ಇಬ್ಬರು ಸೋದರಿಯರನ್ನು ಅಗಲಿದ್ದಾರೆ. ಪೋಸ್ಟ್ ಮಾರ್ಟಂ ನಂತರ ಶವವನ್ನು ಕುಟುಂಬಸ್ಥರಿಗೆ ವೈದ್ಯರು ಹಸ್ತಾಂತರಿಸಲಿದ್ದಾರೆ.