ಲೋಕಸಭೆ ಕಲಾಪಕ್ಕೆ ಅಡ್ಡಿ- ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು

ಬೆಲೆ ಏರಿಕೆ ಖಂಡಿಸಿ ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ( CONGRESS ) ಸಂಸದರನ್ನು ಲೋಕಸಭೆಯಿಂದ ಇಡೀ ಅಧಿವೇಶನದ ಅವಧಿಗೆ ಅಮಾನತು ಮಾಡಲಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಹೊರಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಆದರೂ ಸದನದಲ್ಲೇ ನಿರಂತರ ಪ್ರತಿಭಟನೆ ನಡೆಸಿದ್ದರಿಂದ ಆಕ್ರೋಶಗೊಂಡ ಸ್ಪೀಕರ್, ನಾಲ್ವರು ಕಾಂಗ್ರೆಸ್ ಸಂಸದರು ಇಡೀ ಅಧಿವೇಶನದಲ್ಲಿ ಭಾಗಿಯಾಗದಂತೆ ಅಮಾನತು ಮಾಡಿದರು. ಅಮಾನತುಗೊಂಡಿರುವ ಕಾಂಗ್ರೆಸ್ ಸಂಸದರೆಂದರೆ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್. ಸ್ಪೀಕರ್ ಕ್ರಮದ ನಂತರ ನಾಲ್ವರು ಸಂಸದರು ಸಂಸತ್ ಮೈದಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ :-  100 ಕೋಟಿ ನೀಡಿದರೆ ರಾಜ್ಯಪಾಲರ ಹುದ್ದೆ, ರಾಜ್ಯಸಭಾ ಸದಸ್ಯತ್ವದ ಭರವಸೆ – ವಂಚನೆಯ ಜಾಲ ಭೇದಿಸಿದ ಸಿಬಿಐ

ಕೆಲವರನ್ನು ಅಮಾನತು ಮಾಡುವ ಮೂಲಕ ಸರ್ಕಾರ ತನ್ನ ಸಂಸದರನ್ನು ಬೆದರಿಸಲು ಪ್ರಯತ್ನಿಸುತ್ತಿದೆ. ಆದರೆ ನಮ್ಮ ಸಂಸದರು ಜನರಿಗೆ ಮುಖ್ಯವಾದ ಸಮಸ್ಯೆಗಳನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಮಧ್ಯಾಹ್ನ 3 ಗಂಟೆಯ ನಂತರ ಅಧಿವೇಶನ ಪುನರಾರಂಭಗೊಂಡಾಗ ವಿರೋಧ ಪಕ್ಷದ ಸಂಸದರು ಭಿತ್ತಿಪತ್ರಗಳೊಂದಿಗೆ ಮರಳಿ ಪ್ರತಿಭಟನೆ ನಡೆಸಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷಗಳ ಸಂಸದರ ವರ್ತನೆಯನ್ನು ಖಂಡಿಸಿದರು. ಕಲಾಪ ಸುಗಮವಾಗಿ ನಡೆಯಲು ಮತ್ತೊಮ್ಮೆ ಸದನದೊಳಗೆ ಫಲಕಗಳನ್ನು ತಂದು ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ :- ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!