ಮಂಡ್ಯ : ಬೈಕ್ – ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲನಾಯಕನಹಳ್ಳಿ ಗೇಟ್ ಬಳಿ ನಡೆದಿದೆ.
ಬೈಕ್ ಸವಾರರು ತುಮಕೂರಿನಿಂದ ಮದ್ದೂರು ಕಡೆಗೆ ಬರುತ್ತಿದ್ದರು. ಟಿಪ್ಪರ್ ಮದ್ದೂರ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.