ಹಾಸನ : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಇಬ್ದಾಣಿ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿದರಿನಕೆರೆ ಗ್ರಾಮದ ಚಂದನ್ (18), ಸಂತೊಷ್ (27) ರಮೇಶ್(32) ಮೃತ ದುರ್ದೈವಿಗಳು.
ಒಂದೇ ಬೈಕ್ ನಲ್ಲಿ ಮೂವರು ಯುವಕರು ಹಗರೆಯಲ್ಲಿರುವ ದೇವೀರಮ್ಮ ದೇವಾಲಯಕ್ಕೆ ಹೋಗಿ ಬರುವ ವೇಳೆ ಲಾರಿ ಓವರ್ ಟೇಕ್ ಮಾಡುವ ಸಂದರ್ಭ ನೇರವಾಗಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು ಚಂದನ್ ಹಾಗೂ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ರಮೇಶ್ ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಕೊನೆಯುಸಿರೆಳೆದಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಎಸ್ಕೇಪ್ ಆಗಿದ್ದು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.