ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ ? – ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? ಎಂದು ಪ್ರತಿ ಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈ ಕುರಿತಾಗಿ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿ ಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಆರೋಪ ಗಂಭೀರ ಸ್ವರೂಪದ್ದಾಗಿದೆ. ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದಿದ್ದಾರೆ.

BJP MLA Basanagouda patil yatnal talks over cd case | 'SIT ತಂಡ'ದಲ್ಲಿ  ವಿಜಯೇಂದ್ರ ಪರ ಇರುವ ಅಧಿಕಾರಿಗಳಿದ್ದಾರೆ: ಯತ್ನಾಳ್ ಹೊಸ ಬಾಂಬ್ Karnataka News in  Kannada


ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ಕೊಟ್ಟು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಬೊಮ್ಮಾಯಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂಓದಿ :- CID ನೋಟಿಸ್ ಗೆ ಕಡೆಗೂ ಉತ್ತರ ಕೊಟ್ಟ ಪ್ರಿಯಾಂಕ ಖರ್ಗೆ


ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ತನಿಖೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ ಎಂದರು. ಈ “ಪೇಮೆಂಟ್ ಸೀಟುಗಳು” ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು.


ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿಎಸ್ ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂದೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ. ಇದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಂಡ, ಸಾವಿರಾರು ಅಮಾಯಕರು ಭವಿಷ್ಯ ಕಳೆದುಕೊಂಡರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ :- ನಮ್ಮ ಸಿದ್ದಾಂತ ನಂಬಿ ಯಾರು ಪಕ್ಷಕ್ಕೆ ಬರ್ತಾರೋ ಅವ್ರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ – ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!