ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ – ಅಶ್ವಥ್ ನಾರಾಯಣ್

ರಾಜ್ಯದಲ್ಲಿ ಅಶ್ವಥ್ ನಾರಾಯಣ್ (Ashwath narayan) ಮತ್ತೆ ಆಪರೇಷನ್ ಕಮಲದ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದು ಹುಬ್ಬಳ್ಳಿಯಲ್ಲಿ (Hubballi) ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ (BJP) ಉತ್ತಮ ಭವಿಷ್ಯವಿದೆ ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ. ಯುಪಿಯಲ್ಲಿ ಹಿಂಸಾಚಾರ ಹೋರಾಟ ಹಿನ್ನೆಲೆಯಲ್ಲಿ. ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ ಇದು ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ. ರಾಜ್ಯಸಭೆಯಲ್ಲಿ ಎ ಟೀಂ ಬಿ ಟೀಂ ಅಂತ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಅಶ್ವಥ್ ನಾರಾಯಣ್ ತಿಳಿಸಿದರು. ಇದನ್ನೂ ಓದಿ : – ರೇವಣ್ಣ ಮತ ಸಿಂಧುಗೊಳಿಸಿದ ಕೇಂದ್ರ ಚುನಾವಣಾ ಆಯೋಗ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!