ಆರ್ ಎಸ್ ಎಸ್ (RSS) ನವರು ಬ್ರಿಟಿಷ್ ಜೊತೆಗೆ ಶಾಮೀಲು ಆಗಿದ್ರು. ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್ಎಸ್, ಬಿಜೆಪಿ ಭಾಗಿ ಆಗಿಲ್ಲ ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ (Ramalinga reddy) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ತಾವೇ (ಆರ್ ಎಸ್ ಎಸ್, ಬಿಜೆಪಿ) ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಿಕೊಳ್ತಿದ್ದಾರೆ. ಬಿಜೆಪಿಯವರು ದೇಶವನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ ಎಂದು ಕಿಡಿ ಕಾರಿದ್ರು. ಬಿಜೆಪಿಯವರು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಬುರುಡೆ ಜನರ ಪಕ್ಷ ಎಂದು ಬಿಜೆಪಿ ಹೆಸರು ಬದಲಾಯಿಸಿಕೊಳ್ಳಬೇಕು. ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ತರುತ್ತಿದ್ದಾರೆ. ಇದು ಬಹಳ ದಿನ ನಡೆಯೋದಿಲ್ಲ ಎಂದು ಬಿಜಿಪಿ ವಿರುದ್ದ ವಾಗ್ದಾಳಿ ನಡೆಸಿದ್ರು.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ (Rahul gandhi) ಮಾತಿನಂತೆ ಚುನಾವಣೆ ಆಗುತ್ತಿದೆ. ಶಶಿ ತರೂರ್ (Shashi taroor) , ಮಲ್ಲಿಕಾರ್ಜುನ ಖರ್ಗೆ (Mallikharjun kharge) ಮಧ್ಯೆ ಚುನಾವಣೆ ಆಗ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ :- ಎಲ್ಲರು ನನಗೆ ಬೆಂಬಲಿಸಿ ನಾನು ಕೆಳಮಟ್ಟದ ದಿಂದ ಬಂದವನು – ಮಲ್ಲಿಕಾರ್ಜುನ ಖರ್ಗೆ