ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ (85) ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾನಗಲ್ ಕ್ಷೇತ್ರದ ಶಾಸಕ ಸಿಎಂ ಉದಾಸಿ ಮಂಗಳವಾರ ಮಧ್ಯಾಹ್ನ 2 ಗಂಟೆ 54 ನಿಮಿಷದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
1985ರಲ್ಲಿ ಜನತಾದಳದಿಂದ ಸ್ಪರ್ಧಿಸಿ ವಿಜೇತರಾಗಿದ್ದ ಉದಾಸಿ 2004ರಲ್ಲಿ ಬಿಜೆಪಿಯಿಂದ ಗೆಲುವು ಕಂಡಿದ್ದರು. ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿದ್ದರು. ನಂತರ ಕೆಜೆಪಿಯಿಂದ ಸ್ಪರ್ಧಿಸಿ ಸೋಲುಂಡಿದ್ದರು.
ಉದಾಸಿ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದ ಗಣ್ಯರು ಸಂತಾಪ ಸೂಚಿಸಿದ್ದಾರೆ.