ದಾವಣಗೆರೆ : ಆರೋಗ್ಯ ಸಚಿವ ಕೆ ಸುಧಾರ್ ಅವರು ಖಾತೆ ನಿಭಾಯಿಸಲು ಸಾಧ್ಯವಾಗಲಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಚಾಮರಾಜನಗರ ದುರಂತ, ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜನರ ಜೀವದ ಜೊತೆ ಚೆಲ್ಲಾಟವಾಡುವುದು ಪಕ್ಷಕ್ಕೆ ಮುಜುಗರವಾಗುತ್ತದೆ. ಎರಡೆರಡು ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೋಟ್ಟು ಹೋಗಿ ಎಂದರು.
ಕೆಲ ಸಚಿವರು ತಮ್ಮ ಸ್ವಂತ ಕೆಲಸದಲ್ಲಿ, ಐಷಾರಾಮಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ ಹೊರತು ಜನರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ. ಈ ರೀತಿ ಕೆಲಸ ಮಾಡಲೆಂದೇ ಇವರು ಎರಡೆರಡು ಖಾತೆ ಪಡೆದುಕೊಂಡಿದ್ದು? ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹಗಲು ರಾತ್ರಿಯೆನ್ನದೇ ಕೆಲಸ ಮಾಡುತ್ತಿದ್ದಾರೆ. ಸಚಿವರುಗಳಿಗೆ ಏನಾಗಿದೆ? ಎಂದು ಪ್ರಶ್ನಿಸಿದ್ದಾರೆ.