ನಮ್ಮ ಬಿಜೆಪಿ ಪಕ್ಷಕ್ಕೆ ಎಲ್ಲಿಂದಲ್ಲೋ ಬಂದವರನ್ನು ಸೇರಿಸಿಕೊಳ್ಳುವುದಿಲ್ಲ ಜೈಲಿಗೆ ಹೋದವರನ್ನು ನಾವು ಸೇರಿಸಿಕೊಳ್ಳುವುದಿಲ್ಲ ಅಂತಾ ಸಚಿವ ಸಿ.ಪಿ.ಯೋಗೀಶ್ವರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪರೋಕ್ಷವಾಗಿ ಲೇವಡಿ ಮಾಡಿದರು.
ಬೆಂಗಳೂರು ಹೊರವಲಯದ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ವಲಸೆ ಹೋಗಿರುವವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನಿಸಿರುವ ಡಿಕೆಶಿಗೆ ಸಿಪಿವೈ ತಿರುಗೇಟು ನೀಡಿದರು.
ಇನ್ನೂ ಹೆಚ್.ಡಿ.ಕೆ ವಿರುದ್ಧ ಮಾತನಾಡಿ ಕೆಆರ್‌ಎಸ್ ಸುತ್ತಲೂ ಕಲ್ಲುಗಣಿಗಾರಿಕೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಈ ಬಗ್ಗೆ ಮಂಡ್ಯ ಸಂಸದರಿಗೆ ಆತಂಕ ಇರಬೇಕು ಅವರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ, ಈ ಬಗ್ಗೆ ಕುಮಾರಸ್ವಾಮಿ ಮಾತನಾಡಿರುವುದು ಸರಿ ಇಲ್ಲ. ಅವರು ಈಗಾಗಲೇ ತಮ್ಮ ವ್ಯಕ್ತಿತ್ವ ಕಳೆದುಕೊಂಡಿದ್ದಾರೆ. ಅವರ ಮಾತುಗಳು ತೂಕ ಕಳೆದುಕೊಂಡಿದೆ ಅವರ ರಾಜಕೀಯ ನೆಲೆ ದಿನೆದಿನೇ ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.
ನಾನು ಹೇಳಿಕೆ ನೀಡಿದ ಮಾರನೇ ದಿನವೇ ಕುಮಾರಸ್ವಾಮಿ ಸಿಎಂ ಅವರನ್ನ ಭೇಟಿ ಮಾಡುತ್ತಾರೆ. ಮಗನ ಸೋಲಿನ ಹತಾಶೆಯಿಂದ ಹೆಚ್‌ಡಿಕೆ ಮಾತನಾಡುತ್ತಿದ್ದಾರೆ. ಉತ್ತರ ಕರ್ನಾಟದಕಲ್ಲಿ ಜಿಡಿಎಸ್ ನೆಲೆ ಇಲ್ಲ. ಮಂಡ್ಯ ಬಿಡಲು ರೆಡಿ ಇಲ್ಲ. ಹೀಗಾಗಿ ಏನೆನೋ ಮಾತನಾಡುತ್ತಿದ್ದಾರೆ ಎಂದು ಯೋಗೇಶ್ವರ್ ತಿರುಗೇಟು ನೀಡಿದರು.
ನನ್ನ ನಿಲುವನ್ನು ಆಗಾಗೆ ವ್ಯಕ್ತಪಡಿಸುತ್ತೇನೆ. ಲೋಪಗಳ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದೇನೆ. ಐದು ಬಾ ನಾನು ಗೆಲುವು ಸಾಧಿಸಿದ್ದೇನೆ. ರೇಣುಕಾಚಾರ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದಾನೆ. ಅವರಿಗೆ ಬೆಂಗಳೂರಿನಲ್ಲಿ ಐಷಾರಾಮಿ ಮನೆ ಸಿಕ್ಕಿದೆ ಎಂದರೆ ಅಲ್ಲಿ ನನ್ನ ಶ್ರಮವಿದೆ ಎಂದು ರೇಣುಕಾಚಾರ್ಯರನ್ನ ಕುಟುಕಿದರು.