ವಿಧಾನಸಭೆ ಚುನಾವಣೆಗೆ ಸಿದ್ದತೆಗಳು ಆರಂಭಗೊಂಡಂತೆ ಪಕ್ಷಾಂತರ ಚಟುವಟಿಕೆಗಳು ಕೂಡಾ ಬಿರುಸು ಪಡೆದಿದೆ. ಮೈಸೂರು ಭಾಗದಲ್ಲಿ ಬಿಜೆಪಿ ( BJP ) ಮತ್ತೊಂದು ವಿಕೆಟ್ ಪತನವಾಗಿದ್ದು, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ( CONGRESS ) ಸೇರಲು ಸಿದ್ದರಾಗಿದ್ದಾರೆ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್, ( SANDEESH NAGARAJ ) ನಾನು ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ, ಅಕ್ರಮವಾಗಿದ್ದೇನೆ. ಬಿಜೆಪಿವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೋಸ ಮಾಡುವುದರಲ್ಲಿ ಬಿಜೆಪಿ ಅವರು ನಂಬರ್ ಓನ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸಹವಾಸ ನನಗೆ ಸಾಕು, ಎಚ್.ವಿಶ್ವನಾಥ್ ಗೆ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ನಾನು ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಡಿಕೆ ಶಿವಕುಮಾರ್ ಅವರ ಜೊತೆಯೂ ಮಾತಾಡುತ್ತೇನೆ ಎಂದು ಹೇಳಿದ್ರು. ಇದನ್ನು ಓದಿ : – BREAKING – ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ವಿಘ್ನ ..!
ಬಿಜೆಪಿ ನಾಯಕರು ಯಡಿಯೂರಪ್ಪ ( B.S YEDIURAPPA ) ನನ್ನು ಒಳ್ಳೆತನದಲ್ಲಿ ಮುಗಿಸಿದರು. ಆಗ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದ್ದು. ವಿಜಯೇಂದ್ರನನ್ನು ಬಲಿ ಕೊಡಲು ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ ಎಂದು ಸಂದೇಶ್ ನಾಗರಾಜ್ ಕಿವಿಮಾತು ಹೇಳಿದ್ದಾರೆ. ವಿಜಯೇಂದ್ರ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಲು ಅನುಭವಿಸುತ್ತಾರೆ ಎಂದು ಗುಡುಗಿದ್ದಾರೆ.
ಇದನ್ನು ಓದಿ : – ಸಂವಿಧಾನ ಉಳಿಸಲು ಮೋದಿ ಹತ್ಯೆಗೆ ಕರೆ- ಕಾಂಗ್ರೆಸ್ ಮುಖಂಡನ ವಿರುದ್ಧ FIR