ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋದರೆ ಗೆಲುವು ಕಷ್ಟ ಎಂದು ಆರ್ ಎಸ್ ಎಸ್ ಸಮೀಕ್ಷೆ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇರುವಾಗ ಸಿಎಂ ಸ್ಥಾನದಿಂದ ವಿಜಯ್ ರೂಪಾನಿ ಅವರನ್ನು ಕೆಳಗಿಳಿಸಿದ್ದು ಅಚ್ಚರಿ ಮೂಡಿಸಿತ್ತು. ಅಲ್ಲದೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.
ಆದರೆ ವಿಜಯ್ ರೂಪಾನಿ ನೇತೃತ್ವದಲ್ಲಿ ಚುನಾವಣೆಗೆ ಗೆಲುವು ಕಷ್ಟ. ಆದ್ದರಿಂದ ಸಿಎಂ ಹಾಗೂ ಸಂಪುಟದಲ್ಲಿರುವ ಕೆಲವು ಸಚಿವರಿಗೆ ಕೊಕ್ ನೀಡಬೇಕು ಎಂದು ಆರ್ ಎಸ್ ಎಸ್ ಸಮೀಕ್ಷೆ ನಡೆಸಿ ಸಲ್ಲಿಸಿದ್ದ ವರದಿಯಲ್ಲಿ ಶಿಫಾರಸು ಮಾಡಿತ್ತು.
ಬಿಜೆಪಿ ವೈಫಲ್ಯಗಳನ್ನು ಗಮನಿಸಿರುವ ಆಮ್ ಆದ್ಮಿ ಪಕ್ಷ ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕಣಕ್ಕಿಳಿಯುತ್ತಿದ್ದು, ರಾಜ್ಯಾದ್ಯಂತ ಜನ ಸಂವೇದನಾ ಯಾತ್ರಾ ಆಯೋಜಿಸಿತ್ತು. ಈ ವೇಳೆ ಆರ್ ಎಸ್ ಎಸ್ ಕಾರ್ಯಕರ್ತರು ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಬಿಜೆಪಿ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.