ತಿನ್ನಲು ಅನ್ನವಿಲ್ಲ ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ಮನೆ ಬಾಡಿಗೆ ಕಟ್ಟಲು ಆಗ್ತಿಲ್ಲ. ನಾನು ಮುಷ್ಕರದಲ್ಲಿ ಭಾಗಿಯಾಗಿರಲಿಲ್ಲ ಆದ್ರು ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.
ಹೀಗಾಗಿ ನನಗೆ ಅನ್ಯಾಯವಾಗಿದೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಗಳಿಗೆ ಹಾಗೂ ಪ್ರಧಾನಿಗೆ, ಮುಖ್ಯಮಂತ್ರಿ ಬೊಮ್ಮಯಿ ಹಾಗೂ ಸಾರಿಗೆ ಸಚಿವ ಶ್ರೀ ರಾಮುಲುಗೆ BMTC ನೌಕರ ಶಂಬುಲಿಂಗಯ್ಯ ಚಿಕ್ಕಮಠ ಪತ್ರ ಬರೆದಿದ್ದಾರೆ. ಒಂದು ವರ್ಷದಿಂದ ಮಾಡಲು ಕೆಲಸವಿಲ್ಲ. ಇದನ್ನೂಓದಿ :- LPG ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ – ನೂತನ ದರ ಇಂದಿನಿಂದ ಜಾರಿ
ಈ ಬಗ್ಗೆ ಸಾಕಷ್ಟು ಬಾರಿ ಸಾರಿಗೆ ಸಚಿವರಿಗೆ ಮನವಿ ಮಾಡಿದ್ರು ನನಗೆ ನ್ಯಾಯ ಕೊಡಿಸಲಿಲ್ಲ. ಹಾಗಾಗಿ ನಾನು ಮತ್ತು ನನ್ನ ಹೆಂಡತಿ ಮಕ್ಕಳಿಗೆ ದಯಾಮರಣ ಕೊಡಿ. ಈಗಾಗಲೇ ವಜಾಗೊಂಡ 5-10 ಹತ್ತು ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಸರ್ಕಾರ ವಜಾಗೊಂಡ ನೌಕರರನ್ನು ಮತ್ತೆ ಕೆಲಸ ನೀಡುತ್ತಿಲ್ಲ. ಪ್ರತಿಭಟನೆಗೆ ಕರೆ ಕೊಟ್ಟವರನ್ನು ಮತ್ತು ಭಾಗಿಯಾದವರಿಗೆ ಮಾತ್ರ ಪುನಃ ಕೆಲಸಕ್ಕೆ ಕರೆಸಿಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂಓದಿ :- ಕೆ.ಎಸ್.ಆರ್. ಟಿ. ಸಿ ಹಾಗೂ ಇನೋವಾ ಕಾರ್ ನಡುವೆ ಡಿಕ್ಕಿ – ಸ್ಧಳದಲ್ಲೇ 3 ಮಂದಿ ಸಾವು