ಹುಕ್ಕಾ ಪ್ರೀಯರಿಗೆ ಶಾಕ್ ನೀಡಲು ಮುಂದಾದ ಸರಕಾರ
ಬೆಂಗಳೂರು : ಸಿಲಿಕಾನ್ ಸಿಟಿ ದಿನದಿಂದ ದಿನಕ್ಕೆ ಡ್ರಗ್ಸ್ ಸಿಟಿಯಾಗಿ ಬದಲಾಗುತ್ತಿರುವುದಕ್ಕೆ ಹಲವು ಕಟ್ಟನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ.
ರಾಜ್ಯದಲ್ಲಿ ಹುಕ್ಕಾ ಬಾರ್‌ಗಳು ಸಹ ಡ್ರಗ್ಸ್ ಸೇವನೆಯ ಹಾರ್ಟ್ ಸ್ಪಾಟ್ ಗಳಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕಾರಣಕ್ಕೆ ರಾಜ್ಯದಲ್ಲಿ ಹುಕ್ಕಾ ಬಾರ್ ಗಳನ್ನು ನಿಷೇಧಿಸಲು ಪರಿಶೀಲನೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಕಾನೂನಿನಲ್ಲಿ ಕೆಲವು ಲೋಪದೋಷಗಳಿವೆ. ಕಳೆದ ಐದು ವರ್ಷಗಳಲ್ಲಿ ಪತ್ತೆ ಹಚ್ಚಲಾಗದಷ್ಟು ಪ್ರಕರಣಗಳನ್ನು ಕೇವಲ 5 ತಿಂಗಳಲ್ಲಿ ಪತ್ತೆ ಹಚ್ಚಿ 2020 ರಲ್ಲಿ 2786 ಪ್ರಕರಣ ದಾಖಲಿಸಲಾಗಿದೆ. ಇನ್ನು ಕಟ್ಟು ನಿಟ್ಟಾಗಿ ಕ್ರಮ ಕೈಗೊಳ್ಳಲು ಸರಕಾರ ಬದ್ಧವಾಗಿದೆ.
ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಹುಕ್ಕಾ ಬಾರ್‌ಗಳು ತಲೆ ಎತ್ತಿದ್ದು, ಇವುಗಳನ್ನು ನಿಷೇಧಿಸಲು ಸರ್ಕಾರ ಚಿಂತಿಸಿದೆ ಎಂದಿದ್ದಾರೆ. ಡ್ರಗ್ಸ್ ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ. ರಾಜ್ಯದ ಮಹಾನಗರಗಳಲ್ಲಿ ಹುಕ್ಕಾ ಬಾರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಹುಕ್ಕಾ ಬಾರ್‌ಗಳಿಗೆ ಅನುಮತಿ ನೀಡುತ್ತಿವೆ. ಅವುಗಳನ್ನು ನಿಷೇಧಿಸಲು ಸ್ಥಳೀಯ ಸಂಸ್ಥೆಗಳು ಸಹಕಾರ ನೀಡಬೇಕು ಎಂದಿದ್ದಾರೆ.