ಜಿ.ಪಂ.ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಯಿದೆ. ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆ ವಿಭಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸಲು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚರಕನ್ನು ನೇಮಿಸಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸುವ ಆಸಕ್ತರು BE- Enviromental, BE-civil ಅಥವಾ Enviromental science ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿರಬೇಕು. ಇದರ ಜೊತೆಗೆ ಮೂರು ವರ್ಷಗಳ ನೀರು ಮತ್ತು ನೈರ್ಮಲ್ಯ / ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿರಬೇಕು. 45 ವರ್ಷದೋಳಗಿರಬೇಕು. ಸಮಾಲೋಚನ ಶುಲ್ಕವನ್ನು 22 ಸಾವಿರ ನೀಡಲಾಗುವುದು. ಆಸಕ್ತರು 15-2-2021 ರೋಳಗಾಗಿ ಅರ್ಜಿ ಸಲ್ಲಿಸಬಹುದು.