Breaking NewsState News

ಸಿಎಂ ವಿರುದ್ಧಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಆರ್‌ಟಿಐ ಕಾರ್ಯಕರ್ತರೊಬ್ಬರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಮಾತನಾಡಿದ ಅವರು, ದಾಖಲೆ ಸಮೇತ ರಾಜ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿದ್ರೂ ಸಿದ್ದರಾಮಯ್ಯ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಬದಲಿಗೆ, ‘ದೂರು ಅರ್ಜಿಯ ಕುರಿತು ಭಾರತ ಚುನಾವಣೆ ಆಯೋಗದ ಮಾರ್ಗದರ್ಶನ ಕೋರಲಾಗಿದೆ’ ಎಂದು ಲಿಖಿತ ಉತ್ತರ ನೀಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ದೂರಿದ್ದಾರೆ.

ಅಷ್ಟೇ ಅಲ್ಲದೇ ಐರನ್ ಬಾಕ್ಸ್, ಕುಕ್ಕರ್ ಹಂಚಿದ್ದರಿಂದ ನಮ್ಮ ತಂದೆ ಗೆದ್ದಿದ್ದರು ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಯತೀಂದ್ರ ಸಿದ್ದರಾಮಯ್ಯ ಭಾಷಣದ ವಿಡಿಯೋ ವೈರಲ್ ಆಗಿತ್ತು ಎಂದು ಭೀಮಪ್ಪ ಗಡಾದ್ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!