ನಟಿ ಪೂಜಾ ಹೆಗ್ಡೆ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆಲಾ ವೈಕುಂಠಪುರರಾಮುಲೋ ನಟಿ ಭಾನುವಾರ ತನಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ. ನನಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.
ಮೇ ತಿಂಗಳ ಮೊದಲ ವಾರದಲ್ಲಿ ವಿಜಯ್ ಹಾಗೂ ಪೂಜಾ ಹೆಗ್ಡೆ ಸಾಂಗ್ ಶೂಟಿಂಗ್ ಹಾಗೂ ಸ್ಟಂಟ್ ಸನ್ನಿವೇಶದಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ಬೃಹತ್ ಸೆಟ್ ಕೂಡ ನಿರ್ಮಾಣ ಮಾಡಲಾಗಿತ್ತು. ಆದ್ರೀಗ, ಕೊರೊನಾ ವೈರಸ್ ಎರಡನೇ ಅಲೆಯಿಂದಾಗಿ ಚೆನ್ನೈನಲ್ಲಿ ಶೂಟಿಂಗ್ ನಡೆಯುವುದು ಅನುಮಾನವೇ. ಪೂಜಾ ಹೆಗ್ಡೆಗೂ ಕೊರೊನಾ ವೈರಸ್ ಸೋಂಕು ತಗುಲಿರುವುದರಿಂದ ಶೂಟಿಂಗ್ ಪೋಸ್ಟ್ ಪೋನ್ ಆಗುವ ಸಾಧ್ಯತೆ ದಟ್ಟವಾಗಿದೆ.
ಪೂಜಾ ಹೆಗ್ಡೆ ಅವರು 2014 ರಲ್ಲಿ ಒಕ ಲೈಲಾ ಕೋಸಮ್ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಟಾಲಿವುಡ್ನಲ್ಲಿ ಪ್ರಮುಖ ಹಿರೋಯಿನ್ ಆಗಿ ಹೊರಹೊಮ್ಮಿದ್ದಾರೆ. ದುವಾಡಾ ಜಗನ್ನಾಥಮ್, ಅರವಿಂದ ಸಮೇತ ವೀರ ರಾಘವ ಮತ್ತು ಅಲಾ ವೈಕುಂಠಪುರಮಲೂ ಸಿನಿಮಾಗಳಲ್ಲಿ ಮಿಂಚಿದ್ದಾರೆ.