ಅಧಿವೇಶನದ ನಡುವೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಮಹತ್ವದ ಮಾತುಕತೆ ನಡೆಸಿದ್ದಾರೆ. ಖುದ್ದು ಯಡಿಯೂರಪ್ಪ ಅವರೇ ಬೊಮ್ಮಾಯಿ ಅವರನ್ನು ಸಿಎಂ ಕಚೇರಿಗೆ ಕರೆದು ಮಾತುಕತೆ ನಡೆಸಿದ್ರು. ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ಸಹ ಈ ವೇಳೆ ಉಪಸ್ಥಿತರಿದ್ರು. ಸುಮಾರು 20 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಅಮಿತ್ ಶಾ ಆಗಮನ ಕುರಿತಂತೆ ಚರ್ಚೆ ನಡೆದಿದೆ. ಸಂಪುಟ ಪುನಾರಚನೆ ವಿಚಾರ, ನಿಗಮ ಮಂಡಳಿಗಳ ನೇಮಕ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.
ಇದನ್ನು ಓದಿ- ತಮಿಳುನಾಡಿಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ