ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಪ್ರವಾಸವನ್ನು ಒಂದು ದಿನ ವಿಸ್ತರಣೆ ಮಾಡಿದ್ದಾರೆ.
ಶುಕ್ರವಾರ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ. ಇಂದು ಬೆಳಗ್ಗೆ 9 ಗಂಟೆಗೆ ದಾವೋಸ್ ನಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಪ್ರವಾಸ ಮುಂದೂಡಿಕೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ : – ದಾವೋಸ್ ನಲ್ಲಿ ಆಪರೇಷನ್ ಕಮಲ ಪ್ರಸ್ತಾಪ – ಸಿಎಂ, ಲಕ್ಷ್ಮೀ ಮಿತ್ತಲ್ ವಿಡಿಯೋ ವೈರಲ್
ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಚಿಸಿರುವ ಉದ್ಯಮಿಗಳ ಜತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಡಾ.ಅಶ್ವತ್ಥ್ ನಾರಾಯಣ್ ಕೂಡ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ : – ದಾವೋಸ್ ನಲ್ಲಿ ಲಕ್ಷ್ಮಿ ಎನ್. ಮಿತ್ತಲ್ ನ ಭೇಟಿ ಮಾಡಿದ ಸಿಎಂ ಬೊಮ್ಮಾಯಿ