ಗಡಿ ವಿವಾದ- ಕರವೇ ಅಧ್ಯಕ್ಷರಿಗೆ ಬೆಳಗಾವಿ ಪ್ರವೇಶ ನಿಷೇಧ – ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ಪರಿಸ್ಥಿತಿ ಉದ್ವಿಗ್ನ

ಬೆಳಗಾವಿ (Belagavi) ಸಂಬಂಧ ಮಹಾರಾಷ್ಟ್ರ (Maharastra) ನಾಯಕರು ನೀಡಿದ್ದ ಹೇಳಿಕೆ ಖಂಡಿಸಿ ಕರ್ನಾಟಕ (Karnataka) ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ.

ಬೆಳಗಾವಿ (Belagavi) ಸಂಬಂಧ ಮಹಾರಾಷ್ಟ್ರ (Maharastra) ನಾಯಕರು ನೀಡಿದ್ದ ಹೇಳಿಕೆ ಖಂಡಿಸಿ ಕರ್ನಾಟಕ (Karnataka) ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್‌ ಗೇಟ್‌ ಬಳಿ ತಡೆಯಲು ಪೊಲೀಸರು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಟೋಲ್ ಗೇಟ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮಹಾರಾಷ್ಟ್ರದ ಇಬ್ಬರು ಸಚಿವರು ಮಂಗಳವಾರ ಬೆಳಗಾವಿಗೆ ಬರುವ ಕಾರ್ಯಕ್ರಮವಿತ್ತು.

ಇಲ್ಲಿ ನಡೆಯಲಿರುವ ಪರಿನಿರ್ವಾಣ ದಿನದಲ್ಲಿ ಭಾಗವಹಿಸಲು ಅವರು ಬರುವವರಿದ್ದರು. ಆದರೆ, ಗಡಿ ವಿವಾದ (Border dispute) ಉತ್ತುಂಗದಲ್ಲಿರುವ ಕಾಲದಲ್ಲಿ ಅವರ ಆಗಮನದಿಂದ ಶಾಂತಿ ಸುವ್ಯವಸ್ಥೆಗೆ ಸಮಸ್ಯೆ ಆಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರಕಾರವೇ ಅವರನ್ನು ಆಗಮಿಸದಂತೆ ಮನವಿ ಮಾಡಿತ್ತು.


ಕರವೇ ಕಾರ್ಯಕರ್ತರು, ರಾಜ್ಯಾಧ್ಯಕ್ಷ ನಾರಾಯಣ ಗೌಡರು ಬೆಳಗಾವಿ ನಗರ ಪ್ರವೇಶಿಸುವುದನ್ನು ತಡೆಯಲು ಹಿರೇಬಾಗೇವಾಡಿ ಟೋಲ್ ಬಳಿ 400ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದನ್ನೂ ಓದಿ : –  ಕ್ರೀಡಾ ಸಾಧಕರಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ ಸರ್ಕಾರ

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ನಗರದತ್ತ ಮುನ್ನುಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿರುವ ಮಹಾರಾಷ್ಟ್ರ ನೋಂದಣಿಯ 5ಕ್ಕೂ ಹೆಚ್ಚು ಲಾರಿ (Lorry) ಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಣೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಹಾರಾಷ್ಟ್ರ ನೋಂದಣಿ ವಾಹನದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಲಾರಿಯ ಮುಂಭಾಗದ ಗಾಜು ಪುಡಿಪುಡಿಯಾಗಿದೆ.

ಇದನ್ನೂ ಓದಿ : –  ಕ್ರಿಶ್ಚಿಯನ್ ಸಮುದಾಯದ ಮತ ಸೆಳೆಯಲು ಮುಂದಾದ್ರಾ ರೆಡ್ಡಿ..?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!