ಕರ್ನಾಟಕ (karnataka ) – ಮಹಾರಾಷ್ಟ್ರ (Maharastra) ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ. ಕರ್ನಾಟಕ ಬಿಜೆಪಿ ನಾಯಕರು ಹೇಡಿಗಳು.
ಎರಡು ಕಡೆ ಬಿಜೆಪಿ ಸರ್ಕಾರ ಇದ್ದರೂ, ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ.? ಇಬ್ಬರು ಮಾತಾಡಿಕೊಂಡೆ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ..? ಗಡಿ ವಿವಾದದ ಬಗ್ಗೆ ಒಳ್ಳೆ ಲಾಯರ್ ಇಟ್ಟು ವಾದ ಮಾಡಿಸಬೇಕು. ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಮಹಾಜನ ವರದಿಯೇ ಅಂತಿಮ. ಬೆಳಗಾಂ ನಮಗೆ ಸೇರಿದ್ದು. ಒಂದಿಂಚೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ರು.
ಇದನ್ನು ಓದಿ : – ಕರ್ನಾಟಕದಲ್ಲಿ ಚುನಾವಣೆ ಗೆಲ್ಲಬೇಕಾದ್ರೆ ಯಡಿಯೂರಪ್ಪ ಬೇಕೆ ಬೇಕು – ಪ್ರಿಯಾಂಕ್ ಖರ್ಗೆ