ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್ ಸಿಲಿಂಡರ್ ಸೇರಿದಂತೆ ದಿನನಿತ್ಯದ ವಸ್ತುಗಳಬೆಲೆ ಏರಿಕೆಯಾಗಿದೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಹೊರೆಬೀಳಲಿದೆ. ಬೇಸಿಗೆ ಶುರುವಾಗುತ್ತಿದ್ದಂತೆ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ನೀಡಲಾಗಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಸಿ ಕರ್ನಾಟಕವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಆದೇಶ ಹೊರಡಿಸಿದೆ. ವಿದ್ಯುತ್ ದರ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಬೆಸ್ಕಾಂ ಸೇರಿದಂತೆ 5 ನಿಗಮಗಳಲ್ಲಿಯೂ ಬೆಲೆ ಏರಿಕೆಯಾಗಿದೆ. ಕಳೆದ ವರ್ಷವೂ 35 ಪೈಸೆ ಏರಿಕೆ ಮಾಡಲಾಗಿತ್ತು.
0 139 Less than a minute