ಬಿಹಾರ( BIHAR ) ದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿಗೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಯು ಸಂಸದರು ಮತ್ತು ಶಾಸಕರ ಸಭೆ ಮುಕ್ತಾಯವಾಗಿದ್ದು, ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಹೊಸ ಮೈತ್ರಿ ಸರ್ಕಾರ ರಚನೆಗೆ ನಿತೀಶ್ ಮುಂದಾಗಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಭೇಟಿಗೆ ಸಂಜೆ 4 ಗಂಟೆಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : – ಮಹಾರಾಷ್ಟ್ರದ ನೂತನ ಸಚಿವರಾಗಿ ಬಿಜೆಪಿ, ಶಿವಸೇನೆಯ 18 ಶಾಸಕರಿಂದ ಪ್ರಮಾಣವಚನ ಸ್ವೀಕಾರ