ತಮ್ಮ ಕೊರೊನಾ ಸೋಂಕಿಗೆ ಬಲಿಯಾದ ಮಾರನೇ ದಿನವೇ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಆಗಿದ್ದ ಅಕ್ಕ ಕೂಡ ಕೋವಿಡ್ ಗೆ ಬಲಿಯಾದ ಹೃದಯವಿದ್ರಾವಕ ಘಟನೆ ಹೊಸಪೇಟೆಯಲ್ಲಿ ಜರುಗಿದೆ.
ಒಂದು ದಿನದ ಅಂತರದಲ್ಲಿ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮಿತ್ (45) ಹಾಗೂ ತಮ್ಮ ಸಾವಿಯೋ ಸ್ಮಿತ್ (42) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 8 ದಿನಗಳಿಂದ ಬಳ್ಳಾರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾವಿಯೋ ಸ್ಮಿತ್ ನಿನ್ನೆ ಮೃತಪಟ್ಟಿದ್ದರು. ಶನಿವಾರ ಬೆಳಿಗ್ಗೆ ಅಕ್ಕ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಅಸುನೀಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕ್ಯಾರೊಲಿನ್ ಲೂಸಿಯಾ ಸ್ಮಿತ್ ಹೊಸಪೇಟೆಯ ಜನನಿ ಮಹಿಳಾ ಸಬಲೀಕರಣ ಸಂಘಟನೆಯಲ್ಲಿಯೂ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೇ ಹೊಸಪೇಟೆ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಸೇವಕಿಯಾಗಿ ಸೇವೆ ಸಲ್ಲಿಸಿದ್ದರು.