ವಿಜಯಪುರ : ಬಟ್ಟೆ ತೊಳೆಯಲು ಬಾವಿಗಿಳಿದಿದ್ದ ಅಣ್ಣ – ತಮ್ಮ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಬಾವಿಯಲ್ಲಿ ನಡೆದಿದೆ.
ಮೃತರನ್ನು ಪಟ್ಟಣದ ಆಶ್ರಯ ಕಾಲನಿ ನಿವಾಸಿಗಳಾದ ಪ್ರೇಮು ಹಡಪದ(14) ಹಾಗೂ ಪುನೀತ್ ಹಡಪದ(10) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಬಿ.ಎಸ್.ನೇತೃತ್ವದಲ್ಲಿ ಬಾಲಕರ ಮೃತ ದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಘಟನೆ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.