2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶದ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸೌಧ ಸಭಾಂಗಣದಲ್ಲಿ ಸಾಧನಾ ಸಮಾವೇಶದಲ್ಲಿ ರಾಜೀನಾಮೆ ಘೋಷಿಸಿದ ನಂತರ ಭೋಜನ ಸೇವಿಸಿದ ನಂತರ ರಾಜ್ಯಪಾಲರ ಭವನಕ್ಕೆ ತೆರಳಿದ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ಥೋಮರ್ ಸಿಂಗ್ ಗೆಹ್ಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ವಯಂ ಪ್ರೇರಿತರಾಗಿ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದೇನೆ. ದೆಹಲಿಯಿಂದ ಯಾವುದೇ ಒತ್ತಡ ಬಂದಿಲ್ಲ. ರಾಜ್ಯಪಾಲರ ಹುದ್ದೆ ಆಹ್ವಾನ ನಿರಾಕರಿಸಿದ್ದು, ರಾಜ್ಯದಲ್ಲಿದ್ದುಕೊಂಡೇ ಪಕ್ಷ ಸಂಘಟನೆಯತ್ತ ಗಮನ ಹರಿಸಲಿದ್ದು, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.