ಕಳೆದ ಕೆಲವು ತಿಂಗಳಿನಿಂದ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಚರ್ಚೆಗೆ ತೆರೆ ಎಳೆದಿದ್ದಾರೆ.
ದೆಹಲಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯಡಿಯೂರಪ್ಪ ಅವರ ಕಾರ್ಯವೈಖರಿ ತೃಪ್ತಿ ತಂದಿದೆ. ಹಾಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದರು.