ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ BSY

ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ ಹೆಸರು ಇಡುವುದು ಬೇಡವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನದ ಕನಸಾದ ವಿಮಾನ ನಿಲ್ದಾಣ ಸ್ಥಾಪನೆ ನನಸಾಗುತ್ತಿದೆ. ಇಲ್ಲಿನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದೀರಿ ಇದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಈ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದನ್ನೂ ಓದಿ :- ಸಿದ್ದರಾಮಯ್ಯ 5 ವರ್ಷ ಇದ್ದಾಗ ಎಷ್ಟು ಮರ್ಡರ್ ಗಳು ಆಯ್ತು ? – ಸಿದ್ದರಾಮಯ್ಯ ವಿರುದ್ದ ಗರಂ ಆದ ಹೆಚ್.ಡಿ.ಕೆ

ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೆ ನನ್ನ ಕೃತಜ್ಞತೆಗಳು. ದೇಶದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ.

Waiting for high command orders, will decide soon: BSY as exit talks loom  large | Latest News India - Hindustan Times

ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 ಇದನ್ನೂ ಓದಿ :- ಬೆಲ್ಲದ್ ನಿವಾಸಕ್ಕೆ ಸಿಎಂ- ಕುತೂಹಲಕ್ಕೆ ಕಾರಣವಾಯಿತು ಬೊಮ್ಮಾಯಿ ನಡೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!