Budget 2021: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಅದರಲ್ಲೂ 75 ವರ್ಷ ಮೇಲ್ಪಟ್ಟವರಿಗೆ ಸಂಪೂರ್ಣ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದೆ. ಪಿಂಚಣಿ ಮತ್ತು ಠೇವಣಿಯ ಮೇಲೆ ಬಡ್ಡಿಯನ್ನು ಪಡೆಯುತ್ತಿರುವ ಹಿರಿಯ ನಾಗರಿಕರು ಇನ್ಮುಂದೆ ತೆರಿಗೆಯನ್ನು ಪಾವತಿ ಮಾಡಬೇಕಾಗಿಲ್ಲ. ಅಲ್ಲದೇ ಪಡೆಯುತ್ತಿರುವವರು ಕೂಡ ಇನ್ನು ಮುಂದೆ ಆದಾಯ ತೆರಿಗೆ ಪಾವತಿ ಮಾಡುವ ಅವಶ್ಯಕತೆ ಇಲ್ಲ ಎಂದು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ನೇರ ತೆರಿಗೆ ನೀತಿಯಲ್ಲಿ ಸಾಕಷ್ಟು ಬದಲವಾಣೆಯನ್ನು ತಂದಿದೆ. ಈಗಾಗಲೇ 1 ಲಕ್ಷದ 11 ಸಾವಿರ ಕ್ಕೂ ಅಧಿಕ ಮಂದಿ ಆದಾಯ ತೆರಿಗೆಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಸಲು ನಿರ್ಧರಿಸಲಾಗಿದೆ ಸಚಿವರು ಘೋಷಣೆ ಮಾಡಿದ್ದಾರೆ. ಜನಗಣತಿಗಾಗಿ 3,768 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ ಎಂಬುದನ್ನು ಖಾತ್ರಿ ಪಡಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ ಕಾಗದರಹಿತ ಬಜೆಟ್ ಮಂಡನೆಯಾಗುತ್ತಿದೆ. ಲಾಕ್ ಡೌನ್ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಮತ್ತು ಆತ್ಮನಿರ್ಭರ್ ಯೋಜನೆ ಮಿನಿ ಬಜೆಟ್ ಇದ್ದಂತೆ ಎಂದು ಬಜೆಟ್ ಗೂ ಮುನ್ನ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.