ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಇಳಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 21ರಿಂದ ಲಾಕ್ ಡೌನ್ ನಿಂದ ಮತ್ತಷ್ಟು ಸಡಿಲಗೊಳಿಸಲು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಅನ್ ಲಾಕ್ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಜೂನ್ 21ರಿಂದ ಎರಡನೇ ಹಂತದ ಅನ್ ಲಾಕ್ ಜಾರಿಯಾಗುವ ಸಾಧ್ಯತೆ ಇದ್ದು, ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ.
ಅನ್ ಲಾಕ್ 2.O ನಲ್ಲಿ ಮಾಲ್, ಹೋಟೆಲ್, ಮಾರುಕಟ್ಟೆ ಷರತ್ತುಬದ್ಧ ವಿನಾಯಿತಿ ನೀಡುವ ಸಾಧ್ಯತೆ ಇದ್ದು, ಮದುವೆ ಸಮಾರಂಭಕ್ಕೆ ಇರೋ ಮಿತಿಯನ್ನ 50ಕ್ಕೆ ಏರಿಸುವ ಸಾಧ್ಯತೆ ಇದೆ.
ಸಲೂನ್, ಬಟ್ಟೆ ಅಂಗಡಿ, ಚಿನ್ನದಂಗಡಿ ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆ ತೆರೆಯಲು ಅವಕಾಶ ದೊರೆಯಲಿದೆ. ದಿನದ 8 ಗಂಟೆಗಳ ಕಾಲ ವ್ಯಾಪಾರ ವಹಿವಾಟು, ಹೋಟೆಲ್ ಹಾಗೂ ರೆಸ್ಟೋರೆಂಟ್ ನಲ್ಲಿ ಶೇ.50ರಷ್ಟು ಗ್ರಾಹಕರಿಗೆ ಅವಕಾಶ ದೊರೆಯಲಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಬಸ್ ಸಂಚಾರ ಆರಂಭಗೊಳ್ಳಲಿದ್ದು, ಮಾಸ್ಕ್ ಧರಿಸದ ಪ್ರಯಾಣಿಕರನ್ನು ಬಸ್ ಒಳಗೆ ಹತ್ತಿಸುವಂತಿಲ್ಲ.
ಥಿಯೇಟರ್, ಬಾರ್, ಜಿಮ್, ಸ್ವಿಮ್ಮಿಂಗ್ ಫುಲ್ ಯಥಾಸ್ಥಿತಿ ಮುಂದುವರಿಯಲಿದ್ದು, ಈ ವಿಭಾಗಕ್ಕೆ ಮೂರನೇ ಅನ್ ಲಾಕ್ ಅವಕಾಶ ದೊರೆಯುವ ಸಾಧ್ಯತೆ ಇದೆ.