ರಿಯಲ್ ಎಸ್ಟೇಟ್ ಉದ್ಯಮಿ ಮಾಜಿ ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಯಿ ಡೆವಲಪರ್ಸ್ ಕಂಪನಿ ಮಾಲೀಕ ಹಾಗೂ ಮಾಜಿ ಬೆ.ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಪೆನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವೈಯಕ್ತಿಕ ಕಾರಣಗಳಿಗಾಗಿ ರಾಜರಾಜೇಶ್ವರಿ ನಗರದ ತಮ್ಮ ಮನೆಯಲ್ಲಿ ನಿನ್ನೆ ತಡರಾತ್ರಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಪ್ರಭಾಕರ್ ರೆಡ್ಡಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ಭೇಟಿ ನೀಡಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.