ಬೆಂಗಳೂರು: ಪಂಚರಾಜ್ಯಗಳ ಜೊತೆಗೆ ರಾಜ್ಯದ ಒಂದು ಲೋಕಸಭಾ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತ ಎಣಿಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಜಿದ್ದಾ ಜಿದ್ದಿನ ಹೋರಾಟ ನಡೆದಿದೆ.
ಬೆಳಗಾವಿಯಲ್ಲಿ ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 1571 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಮಂಗಳಾ ಅಂಗಡಿ ಹಿನ್ನಡೆಯಲ್ಲಿದ್ದಾರೆ. ಸತೀಶ್ ಜಾರಕಿಹೊಳಿ 29 863 ಹಾಗೂ ಮಂಗಳಾ ಅಂಗಡಿ 28 ಸಾವಿರ ಮತಗಳನ್ನು ಪಡೆದುಕೊಂಡಿದ್ದಾರೆ.
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮುನ್ನಡೆಯಲ್ಲಿದ್ದು, ಬಸನಗೌಡ ತುರವಿಹಾಳ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಪ್ರತಾಪ್ ಗೌಡ ಪಾಟೀಲ್ ಹಿನ್ನಡೆ ಸಾಧಿಸಿದ್ದಾರೆ.
ಬಸವಕಲ್ಯಾಣದಲ್ಲಿ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾಲಾ ಹಾಗೂ ಜೆಡಿಎಸ್ ಅಭ್ಯರ್ಥಿ ಸೈಯದ್ ಅಲಿ ಹಿನ್ನಡೆಯಲ್ಲಿದ್ದಾರೆ.