ಪಶ್ಚಿಮ ಬಂಗಾಳದ ಮೂರು ಹಾಗೂ ಒಡಿಶಾದ ಒಂದು ಲೋಕಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 30ರಂದು ಉಪ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಪಶ್ಚಿಮ ಬಂಗಾಳದ ಸಂಶೇರ್ ಸಿಂಗ್, ಜಂಗೀಪುರ್ ಮತ್ತು ಭಾಬಿನ್ ಪುರ್ ಮತ್ತು ಒಡಿಶಾದ ಪಿಪ್ಲಿ ಕ್ಷೇತ್ರಗಳಿಗೆ ಸೆಪ್ಟೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯೋಗ ತಿಳಿಸಿದೆ.