ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ದಿಢೀರ್ ದೌಡಾಯಿಸಿದ್ದು, ನಾಳೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ದೊರೆಯುವ ಸಾಧ್ಯತೆ ಇದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಗೆ ಆಗಮಿಸುವಂತೆ ಸೂಚಿಸಿ ಹಿನ್ನೆಲೆಯಲ್ಲಿ ಬೊಮ್ಮಾಯಿ ಇಂದು ಸಂಜೆ 5.15ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು.
ಬೊಮ್ಮಾಯಿ ಸಂಪುಟಕ್ಕೆ ಸೇರುವ 6 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಹೈಕಮಾಂಡ್ 7 ಶಾಸಕರ ಪಟ್ಟಿ ನೀಡಲಿದೆ. ಈ ಮೂಲಕ 13 ಶಾಸಕರು ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಗಿಟ್ಟಿಸಲಿದ್ದಾರೆ. ಇದೇ ವೇಳೆ 20ರಿಂದ 21 ಶಾಸಕರಿಗೆ ಮೊದಲ ಹಂತದಲ್ಲೇ ಮಣೆ ಹಾಕಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.