ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಫೆಬ್ರವರಿ 26 ರಂದು ಭಾರತ್ ಬಂದ್

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೇರಿದಂತೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಫೆ.26ರಂದು ಭಾರತ್ ಬಂದ್ಗೆ ಕರೆ ಕೊಟ್ಟಿದೆ. ಭಾರತದ ರಸ್ತೆ ಸಾರಿಗೆ ವಲಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಅಖಿಲ ಭಾರತ ಸಾರಿಗೆ ಕ್ಷೇಮಾಭಿವೃದ್ಧಿ ಸಂಘ (ಎಐಟಿವಿಎ) ಸಹ ಭಾರತ್ ಬಂದ್ ಗೆ ಬೆಂಬಲ ನೀಡಿದೆ
ಸಿಎಟಿಯ ಎರಡು ದಿನಗಳ ರಾಷ್ಟ್ರೀಯ ವ್ಯಾಪಾರ ಸಮ್ಮೇಳನವು ಇಂದು ನಾಗ್ಪುರದಲ್ಲಿ ನಡೆಯಿತು. ಇದೇ ಸಭೆಯಲ್ಲಿ ಭಾರತ ಬಂದ್ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರ ನಡೆದ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಇದೇ ಸಭೆಯಲ್ಲಿ ಜಿಸಿಟಿ ಸೇರಿದಂತೆ ವ್ಯಾಪಾರಿಗಳ ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ದೇಶದಲ್ಲಿ ಜಿಎಸ್ಟಿ ಜಾರಿಗೆ ಬಂದು ನಾಲ್ಕು ವರ್ಷಗಳಾಗಿವೆ ಎಂದು ಸಿಎಟಿ ರಾಷ್ಟ್ರೀಯ ಅಧ್ಯಕ್ಷ ಬಿಸಿ ಭಾರ್ತಿಯಾ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ ವಾಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸುರೇಶ್ ಸೊಂತಾಲಿಯಾ ಹೇಳಿದ್ದಾರೆ.
ತಮ್ಮ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಸಿಎಟಿ ಸಭೆ ತೀರ್ಮಾನಿಸಿತು. ಫೆಬ್ರವರಿ 14 ರಿಂದ 25ರ ವರೆಗೆ ದೇಶಾದ್ಯಂತ ಮಾರುಕಟ್ಟೆಗಳಲ್ಲಿ ಈ ಯಾತ್ರೆ ಜಾರಿಯಾಗಲಿದೆ. ಈ ನಡುವೆ ಶಾಸಕರು, ಸಂಸದರು, ಸಂಬಂಧಪಟ್ಟ ಸಚಿವರಿಗೆ ಮನವಿಗಳನ್ನು ನೀಡಲಿದ್ದಾರೆ ಎನ್ನಲಾಗಿದೆ.