ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ : – RSS ತಂಟೆಗೆ ಬರಬೇಡಿ ಹುಷಾರ್ – ಸಿದ್ದರಾಮಯ್ಯ ವಿರುದ್ಧ ಕೆ ಎಸ್ ಈಶ್ವರಪ್ಪ ಟ್ವೀಟ್
ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ ಎಂದು ತಿಳಿಸಿದ್ದಾರೆ.
ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : – ಶಿಕ್ಷಣ ಸಚಿವರ ಮನೆ ಮೇಲಿನ ದಾಳಿ ಪ್ರಕರಣ – ಬಂಧಿತರನ್ನ ಭೇಟಿ ಮಾಡಲಿರೋ ಡಿಕೆಶಿ