ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಸುಮಾರು 100 ಕಿ.ಮೀ. ದೂರದ ಕೃಷ್ಣಗಿರಿಯ ಸೂಳಗಿರಿಯಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ತಮಿಳುನಾಡು ಮೂಲದ ಗೋಪಿ ಹಾಗು ಬೆಂಗಳೂರು ಮೂಲದ ಸುಮಂತ್ ಮೃತಪಟ್ಟವರು.
ಗೋಪಿ ಅತೀ ವೇಗವಾಗಿ ವಿರುದ್ದ ದಿಕ್ಕಿನಲ್ಲಿ ಬಂದು ಸುಮಂತ್ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಸೂಳಗಿರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.