ಗದಗ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಂಭಿರ ಗಾಯವಾಗಿದ್ದು ಅವರನ್ನು ಹರ್ತಿ ಗ್ರಾಮಸ್ಥರ ಸಹಾಯದಿಂದ ಜಿಮ್ಸ್ ಗೆ ರವಾನಿಸಲಾಗಿದೆ. ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ದುರ್ಘಟನೆ
ಕಾರು ಮರಕ್ಕೆ ಡಿಕ್ಕಿಯ ರಭಸಕ್ಕೆ ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದ ಎನ್ನಲಾಗಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.