ಟ್ಯಾಂಕರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಕೋಟನೂರು ಬಳಿ ನಡೆದಿದೆ.
ರಾತ್ರಿ ಒಂದು ಗಂಟೆ ಸಮಯದಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ರಾಹುಲ್ (25), ಖಾಸಿಂ(26) ಹಾಗೂ ಉಲ್ಲಾಸ್ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತನ ಗುರುತು ಪತ್ತೆಯಾಗಿಲ್ಲ. ಮೃತರೆಲ್ಲರೂ ಕಲಬುರಗಿ ನಗರದ ನಿವಾಸಿಗಳು ಎನ್ನಲಾಗಿದೆ.
ಘಟನೆಯಲ್ಲಿ ಇನ್ನೋರ್ವನಿಗೆ ಗಂಭೀರ ಗಾಯಗಗಳಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.