ಬೆಂಗಳೂರು: ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಗೋದಾಮು ಮೇಲೆ ದಾಳಿ ನಡೆಸಿದ್ದಾರೆ.
ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್‌ನಲ್ಲಿ ಗೋದಾಮು ಇದ್ದು, ಪರವಾನಗಿ ಅನಧಿಕೃತವಾಗಿ ಪಟಾಕಿ ಮಾರಾಟ ಅಂಗಡಿ ಮಾಲೀಕ ಮಾಡುತ್ತಿದ್ದನು. ಯಾವುದೇ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳದೆ ಪಟಾಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ವಶಕ್ಕೆ ಪಡೆದಿದ್ದು, ಅವರಿಂದ ಒಟ್ಟು 25 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ. ಪರವಾನಗಿ ಪಡೆಯದೇ ಜನವಸತಿ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದಾರೆ. ಮಾಹಿತಿ ಮೇರೆಗೆ ಎರಡು ಎರಡು ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ. ವ್ಯಕ್ತಿಯೊರ್ವನ ಬಂಧನವಾಗಿದ್ದು,15 ಲಕ್ಷ ಮೌಲ್ಯದ ಪಟಾಕಿ ಸೀಜ್ ಮಾಡಿದ್ದಾರೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಮತ್ತು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.