ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಎಸ್‍ಐಟಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು. ಮಡಿವಾಳದ ಟೆಕ್ನಿಕಲ್ ಸೆಂಟರ್ಗೆ ಆಗಮಿಸಿದ ರಮೇಶ್ ಜಾರಕಿಹೊಳಿ ಅವರು ವಿಚಾರಣೆಗೊಳಗಾಗಿ ಪೊಲೀಸರು ಕೇಳಿದ ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
ಎಫ್‍ಐಆರ್ ದಾಖಲಾದ ನಂತರ ಎಸ್‍ಐಟಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟೀಸ್ ನೀಡಿದ್ದರು. ಪೊಲೀಸರು ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ಇಂದು ಮತ್ತೊಮ್ಮೆ ರಮೇಶ್ ಜಾರಕಿಹೊಳಿ ಎಸ್‍ಐಟಿ ಪೊಲೀಸರ ವಿಚಾರಣೆ ಎದುರಿಸಿದರು.
ಯುವತಿ ಹಾಗೂ ಜಾರಕಿಹೊಳಿ ನಡುವಿನ ಪರಿಚಯ ಹಾಗೂ ಆಕೆ ಮಾಡಿರುವ ಕೆಲ ಆರೋಪಗಳ ಬಗ್ಗೆಯೂ ಎಸ್‍ಐಟಿ ಪೊಲೀಸರು ರಮೇಶ್ ಜಾರಕಿಹೊಳಿ ಅವರಿಂದ ವಿಷಯಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.