ಬೆಂಗಳೂರು : ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ವಿಡಿಯೋ ಹರಿಬಿಡುತ್ತಿದ್ದ ಯುವತಿ ಇದೀಗ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾಳೆ.
ರಮೇಶ್ ಜಾರಕಿಹೊಳಿ ವಿರುದ್ಧ ಹಲವಾರು ಗುರುತರ ಆರೋಪಗಳನ್ನು ಮಾಡಿದ್ದಾಳೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ನನಗೆ ಜೀವಬೆದರಿಕೆ ಹಾಕಿದ್ದಾರೆ.
ನನ್ನ ಪಾಲಕರನ್ನು ಒತ್ತೆಯಾಗಿಟ್ಟುಕೊಂಡಿದ್ದಾರೆ. ಅವರಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೆ ಹಲವಾರು ಸಾಕ್ಷಿಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ನನ್ನ ಪೋಷಕರಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ. ಹೀಗಾಗಿ ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ ಐಟಿ ತನಿಖೆಯಾಗಬೇಕು ಎಂದು ಯುವತಿ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾಳೆ.