ಕೋವಿಡ್ ಎರಡನೇ ಅಲೆಯಿಂದ ದೇಶದ ಜನರು ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ 2 ತಿಂಗಳ ಕಾಲ ಬಡವರಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಿ ಗರೀಬ್ ಕಲ್ಯಾಣ್ ಯೋಜನೆ-3ರ ಅಡಿಯಲ್ಲಿ ಆಹಾರ ಧಾನ್ಯ ನೀಡಲು ನಿರ್ಧರಿಸಲಾಯಿತು.
ದೇಶದ 79.88 ಕೋಟಿ ಜನರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಇದಕ್ಕಾಗಿ ಕೇಂದ್ರದ ಮೇಲೆ 25,322 ಕೋಟಿ ರೂ. ಹೊರೆ ಬೀಳಲಿದೆ ಎಂದು ಹೇಳಲಾಗಿದೆ.