ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನು ಹತ್ತಿಕ್ಕಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶನಿವಾರ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ ಜಿಲ್ಲಾ ಮಟ್ಟದಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಜೂನ್ 25ರಂದು ಬರೆಯಲಾಗಿರುವ ಪತ್ರದಲ್ಲಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳ ಬಗ್ಗೆ ಬೊಟ್ಟು ಮಾಡಿದೆ. ಕೂಡಲೇ ಈ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.