ದೇಶದಲ್ಲಿ ಕೊರೊನಾ ಪ್ರಮಾಣದಲ್ಲಿ ಭಾರೀ ಹೆಚ್ಚಳ ಹಿನ್ನೆಲೆಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ವಾರದೊಳಗೆ ಲಸಿಕೆ ಹಾಕಿಸಿ ಎಂದು ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ.
ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಎಲ್ಲಾ ಕಾರ್ಯದರ್ಶಿಗಳಿಗೆ ಕೇಂದ್ರ ಮುಖ್ಯ ಕಾರ್ಯದರ್ಶಿ ಬುಧವಾರ ಪತ್ರ ಬರೆದಿದ್ದು, ಜಿಲ್ಲಾ ಮಟ್ಟದಲ್ಲಿ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕಾರ್ಯ 2 ವಾರದೊಳಗೆ ಪೂರೈಸುವಂತೆ ಸೂಚಿಸಿದೆ. 8 ರಾಜ್ಯಗಳಲ್ಲಿ ಕೊರೊನಾ ಪ್ರಮಾಣ ಶೇ.80ರಷ್ಟು ಏರಿಕೆಯಾಗಿದೆ. ಜಿಲ್ಲಾ ಮಟ್ಟದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಿರುವುದನ್ನು ಜಿಲ್ಲಾಧಿಕಾರಿಗಳು ದೃಢಪಡಿಸಿಕೊಳ್ಳಬೇಕು ಎಂದು ಸರಕಾರ ಸಲಹೆ ನೀಡಿದೆ.