ಕೊರೊನಾ ಎರಡನೇ ಅಬ್ಬರದ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳು ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ವಿತರಿಸಲಾಗುವುದು ಎಂದು ಕೇಂದ್ರ ಸರಕಾರ ಮಹತ್ವದ ಘೋಷಣೆ ಮಾಡಿದೆ.
ಪ್ರಧಾನಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ದೇಶದ 80 ಕೋಟಿ ಬಡ ಕುಟುಂಬಗಳಿಗೆ ಮುಂದಿನ 2 ತಿಂಗಳು ಅಂದರೆ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತ ಆಹಾರ ಧಾನ್ಯ ಪೂರೈಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.
ದೇಶದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರದ ಹಿನ್ನೆಲೆಯಲ್ಲಿ ಉಚಿತವಾಗಿ ಆಹಾರ ಧಾನ್ಯ ಪೂರೈಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಪ್ರಧಾನಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ಕುಟುಂಬಗಳಿಗೆ ತಲಾ 5 ಕೆಜಿಯಂತೆ ಉಚಿತ ಆಹಾರ ಧಾನ್ಯ ಪೂರೈಸಲಾಗುವುದು. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವಿನಿಯೋಗಿಸಲಿದೆ.